ಹಿಂದಿನ ಪುಟಕ್ಕೆ
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ:
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ
(ಲೆಕ್ಕಶೀರ್ಷಿಕೆ ರಾಜ್ಯವಲಯ ಯೋಜನೆ 2225-03-277-2-51(2019-20ನೇ ಸಾಲಿನ ಆಯವ್ಯಯ ರೂ.7000.00 ಲಕ್ಷಗಳು)
ಮೆಟ್ರಿಕ್-ನಂತರದ ವಿದ್ಯಾರ್ಥಿವೇತನದ ದರಗಳು
(ಸರ್ಕಾರದ ಆದೇಶ ಸಂ.ಬಿಸಿಡಬ್ಲ್ಯೂ 518 ಬಿಎಂಎಸ್ 2013, ದಿನಾಂಕ 3.9.2013ರಂತೆ)
ಕ್ರ. ಸಂ. ಗುಂಪು ಮಂಜೂರು ಮಾಡಲಾಗುವ ವಿದ್ಯಾರ್ಥಿವೇತನದ
ದರ (ವಾರ್ಷಿಕ)
1 ಗುಂಪು-ಎ 3500/-
2 ಗುಂಪು-ಬಿ 3350/-
3 ಗುಂಪು-ಸಿ 2100/-
4 ಗುಂಪು-ಡಿ 1600/-
ವಿಶೇಷ ಸೂಚನೆ: ವಿದ್ಯಾರ್ಥಿಗಳು ಖಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು.

ಅರ್ಹತೆಗಳು:
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಹಾಗೂ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ
ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
2.ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆ ಮಾನ್ಯತೆ ಪಡೆದ ಅನುದಾನ
ರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್-ನಂತರದ ಶಿಕ್ಷಣವನ್ನು ಪಡೆಯುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ
ಪಡೆಯಲು ಅರ್ಹರಿರುತ್ತಾರೆ.
3.ಸರ್ಕಾರದ ವಿದ್ಯಾರ್ಥಿನಿಲಯಗಳಲ್ಲಿ / ವಸತಿ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನವನ್ನು
ಪಡೆಯಲು ಅರ್ಹರಿರುವುದಿಲ್ಲ.
4.ವಾರ್ಷಿಕ ಆದಾಯಮಿತಿ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ, ಪ್ರವರ್ಗ-2ಎ, 3ಎ, ಮತ್ತು 3ಬಿ ವಿದ್ಯಾರ್ಥಿಗಳಿಗೆ- ರೂ.1.00 ಲಕ್ಷ ನಿಗದಿಪಡಿಸಿದೆ.
5.ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಹಿಂದಿನ ತರಗತಿಗಳಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕ
ಕ್ರ. ಸಂ. ಪ್ರವರ್ಗ ಹೊಸ ನವೀಕರಣ
1 ಪ್ರವರ್ಗ-1 40% 50%
2 ಪ್ರವರ್ಗ-2ಎ, 3ಎ ಮತ್ತು 3ಬಿ 50% 60%
6.ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ, ವಿದ್ಯಾರ್ಥಿವೇತನಕ್ಕೆ ಅರ್ಹರಿರುವುದಿಲ್ಲ.
7.ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
8. ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿಗಳಿಗೆ ಕೋರ್ಸಿನ ಗುಂಪುವಾರು ಪ್ರತಿ ತಿಂಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನವನ್ನು
10 ತಿಂಗಳ ಅವಧಿಗೆ ಅರ್ಹತೆ ಮತ್ತು ಆದಾಯಮಿತಿಯನ್ನು ಪರಿಗಣಿಸಿ, ಮಂಜೂರು ಮಾಡಲಾಗುವುದು.
ಮಂಜೂರಾತಿ ವಿಧಾನ:
1.ಆನ್‍ಲೈನ್ ಮೂಲಕ ಇ-ಪಾಸ್ ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು.
2.ವಿದ್ಯಾರ್ಥಿಗಳು ನಿಗದಿತ ದಾಖಲೆಗಳು ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಸಿ.ಕೋಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ
ಅಂಕಪಟ್ಟಿ ಇತ್ಯಾದಿ ಮಾಹಿತಿಯೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಹಾರ್ಡ್ ಕಾಫಿಯನ್ನು ಸಂಬಂಧಪಟ್ಟ ಕಾಲೇಜುಗಳಿಗೆ ಸಲ್ಲಿಸುವುದು.
3.ಕಾಲೇಜು ಪ್ರಾಂಶುಪಾಲರು ಮತ್ತು ಪರಿಶೀಲನಾ ಅಧಿಕಾರಿಗಳು ಆಯಾ ಹಂತದಲ್ಲಿ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸಿ ಸದರಿ
ದಾಖಲೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು.
4.ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸುವುದು.
5.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಮಾಹಿತಿಯ ಪರಿಶೀಲನೆಯನ್ನು ಮಾಡುವುದು.
6.ಆಯಾ ವರ್ಷದಲ್ಲಿ ಲಭ್ಯವಾಗುವ ಜಿಲ್ಲಾವಾರು ಅನುದಾನಕ್ಕೆ ತಕ್ಕಂತೆ ಅರ್ಹತೆ ಮತ್ತು ಅಂಕಗಳ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ
ವಿದ್ಯಾರ್ಥಿವೇತನವನ್ನು ಮಂಜೂರು
7.ಆಯ್ಕೆಯಾದ ಅರ್ಹ ಅರ್ಜಿಗಳಿಗೆ ಆಯಾ ವರ್ಷದ ಆಯವ್ಯಯಕ್ಕೆ ಅನುಗುಣವಾಗಿ, ಮೀಸಲಾತಿ ನೀತಿಯನ್ವಯ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಿ
ಖಜಾನೆ-2 ತಂತ್ರಾಂಶದ ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾಮಾಡುವುದು.